ನಾಯಕತ್ವದಲ್ಲಿ ಎಂಎಸ್ ಧೋನಿ ಸಾಧನೆಯನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ

  ಆಸ್ಟ್ರೇಲಿಯಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸತತ 10 ಪಂದ್ಯಗಳನ್ನು ಗೆದ್ದಿದ್ದು ಮಾಜಿ ನಾಯಕ ಎಂಎಸ್ ಧೋನಿ ಅವರ ಈ ಹಿಂದಿನ ಸಾಧನೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ. 

 

ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ಎಂಎಸ್ ಧೋನಿ ಅವರು ಸತತ 9 ಏಕದಿನ ಪಂದ್ಯಗಳಲ್ಲಿ ತಂಡ ಗೆದ್ದಿತ್ತು. ಇದೀಗ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ತಂಡ ಸತತವಾಗಿ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

 

ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 87 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕ್ಕಿತ್ತು. ಈ ವೇಳೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಜತೆ ಸೇರಿ ಎಂಎಸ್ ಧೋನಿ ಶತಕದ ಜತೆಯಾಟ ನೀಡಿದರು. ಇವರಿಬ್ಬರ ಆಟ ತಂಡ ಉತ್ತಮ ಮೊತ್ತ ಪೇರಿಸಲು ಸಾಧ್ಯವಾಯಿತು. ತಾಳ್ಮೆಯ ಆಟವಾಡಿ ಧೋನಿ 79 ರನ್ ಗಳನ್ನು ಸಿಡಿಸಿದ್ದು ತಂಡದ ಗೆಲುವಿನ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕೊಹ್ಲಿ ಶ್ಲಾಘಿಸಿದ್ದಾರೆ. 

 

ಎಂಎಸ್ ಧೋನಿ ಅವರು ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲೂ ಸೇರಿ 100ನೇ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಇನ್ನು ಧೋನಿ ಶ್ರೀಲಂಕಾ ವಿರುದ್ಧ ಅಜೇಯ ಆಟ ಪ್ರದರ್ಶಿಸಿದ್ದು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಅವರು ಔಟ್ ಆಗುವ ಮೂಲಕ ಒಟ್ಟಾರೆ 241 ರನ್ ಸಿಡಿಸಿದ್ದಾರೆ. 

 

ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ 26 ರನ್ ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 

Category: